ನೆಲಮಂಗಲ, ನವೆಂಬರ್ 11: ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ತಾಯಿ ಪದ್ಮ ಕೋಣೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಶಿವನಗರದ ಪೃಥ್ವಿ(20) ಮೃತ ಯುವಕ. ಬಿಎ ಓದಿಕೊಂದಿದ್ದು ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದ.
ಅಜ್ಜಿ ಕುಳಯಮ್ಮ ಮತ್ತಿಕೆರೆಯ ಮನೆಯೊಂದನ್ನ ತನ್ನ ಮಗನ ಮಕ್ಕಳಿಗೆ ಆಸ್ತಿ ಕೊಡದೆ ಹೆಣ್ಣು ಮಗಳಿಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಸಂಬಂಧಿಕರನ್ನ ಸೇರಿಸಿ ಮಾತುಕತೆ ಮಾಡಲಾಗಿದ್ದು, ಆದರೆ ಮಾತುಕತೆ ವಿಫಲವಾಗಿದೆ. ಈ ಘಟನೆಯಿಂದ ಮನನೊಂದ ಪೃಥ್ವಿ, ಮನೆಯ ಕೋಣೆಯಲ್ಲಿ ವೇಲ್ ಬಳಸಿ ಪ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡು ಫೈನಾನ್ಸ್
Subscribe to get the latest posts sent to your email.