ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ ಮಹಿಳೆ. ಕೃತ್ಯ ನಡೆದ ಕೆಲವೇ ಗಂಟೆಯಲ್ಲಿ ಪತಿ ಶ್ರೀನಿವಾಸ(60) ನನ್ನು ಪೊಲೀಸರು ಬಂಧಿಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿಯ ಮೇಲೆ ಮಚ್ಚಿನಿಂದ ಶ್ರೀನಿವಾಸ ಹಲ್ಲೆ ಮಾಡಿದ್ದು, ಸುಧಾ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

ಹೊಸಕೋಟೆ ತಾಲೂಕಿನ ಸುಧಾ 34 ವರ್ಷಗಳ ಹಿಂದೆ ಶ್ರೀನಿವಾಸನನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ನಡುವೆ ಕಲಹ ನಡೆಯುತ್ತಿತ್ತು. ಕೋಳಿ ಅಂಗಡಿ ನಡೆಸುತ್ತಿದ್ದ ಶ್ರೀನಿವಾಸ ವಿಪರೀತ ಮದ್ಯವ್ಯಸನಿಯಾಗಿದ್ದ. ಪ್ರತಿದಿನ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಈತನ ಹಿಂಸೆ ತಾಳದೆ ಪತ್ನಿ ತವರು ಮನೆಗೆ ಹೋಗಿದ್ದರು. ತಿಂಗಳ ಹಿಂದೆಯಷ್ಟೇ ಮಕ್ಕಳು ರಾಜೀ ಸಂಧಾನ ಮಾಡಿಸಿ ಮನೆಗೆ ಕರೆದುಕೊಂಡು ಬಂದಿದ್ದಾರೆ. ಮಕ್ಕಳು ಹೊರಗೆ ಹೋಗಿದ್ದಾಗ ಶ್ರೀನಿವಾಸ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.


Discover more from ಕರುನಾಡು ಫೈನಾನ್ಸ್

Subscribe to get the latest posts sent to your email.

Leave a Reply